ಕೇರಳ: ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಮಾಲಾಧಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಎಂಬವರು ಫ್ಲೈ ಓವರ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡ ಇವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತ ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.