ಸಾಂದರ್ಭಿಕ ಚಿತ್ರ
ಮಳೆಯ ಅಬ್ಬರ ಕಡಿಮೆಯಾಗಿ ಇದೀಗ ಚಳಿ ಆರಂಭವಾಗಿದ್ದು ಜನ ಈಗಾಗಲೆ ಚಳಿಯಲ್ಲಿ ನಡುಗುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ 3 ದಿನ ಶೀತದ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಡಿಕೆಗಿಂತ ಅಧಿಕ ಮಳೆ ಸುರಿದಿರುವುದು, ಭೂಮಿಯಲ್ಲಿ ತೇವಾಂಶ ಇರುವುದು, ಮೋಡ ಕವಿದ ವಾತಾವರಣ, ಸೈಕ್ಲೋನ್ ಉಂಟಾಗಿರುವುದು, ಉತ್ತರದಿಂದ ದಣದತ್ತ ಗಾಳಿ ಬೀಸುತ್ತಿರುವುದೂ ಸೇರಿ ವಿವಿಧ ಕಾರಣಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ 5-6 ಡಿ.ಸೆ.ಉಷ್ಣಾಂಶ ಇಳಿಕೆಯಾಗಿದೆ. ಹೀಗಾಗಿ ಕಲಬುರಗಿ, ವಿಜಯಪುರದಲ್ಲಿ ಡಿ.17ರಿಂದ ಡಿ.19ರವರೆಗೆ ತೀವ್ರ ಶೀತದ ಅಲೆಗಳು ಬೀಸಲಿರುವ ಕಾರಣ ಈ ಎರಡೂ ಜಿಲ್ಲೆಗಳಿಗೆ ಇಲಾಖೆ ರೆಡ್ ಅರ್ಲಟ್ ನೀಡಿದೆ.
21ರಿಂದ ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ..!
ಡಿ.21ರಿಂದ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ನಗರ, ಬೆಂ.ಗ್ರಾಮಾAತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ವಿಜಯನಗರದಲ್ಲಿ ಡಿ.21ರಿಂದ ಡಿ.23ರವರೆಗೆ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಡಿ.21ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.