ಕರೆಂಟ್ ಶಾಕ್ ಹೊಡೆದು 9 ನೇ ತರಗತಿ ವಿದ್ಯಾರ್ಥಿ ಸಾವು: ಪೆರೊಡಿತ್ತಾಯನ ಕಟ್ಟೆ ಬಳಿ ದುರ್ಘಟನೆ:

 

 

 

 

ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಬೆಳಗ್ಗೆ ನಡೆದಿದೆ.
ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸ್ಟೀಪನ್ (14) ಕ್ರಿಸ್ ಮಸ್ ಪ್ರಯುಕ್ತ ಇಂದು ಸಂಜೆ ಮನೆಗೆ ಸಾಂತಕ್ರೊಸ್( ಕ್ರಿಸ್ ಮಸ್ ಕರೊಲ್) ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಡಿರುವುದಾಗಿ ತಿಳಿದು ಬಂದಿದೆ.

ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕಳೆದ ಮೂರು ವರ್ಷಗಳ ಹಿಂದೆ ಮೃತರಾಗಿದ್ದು ಅಜ್ಜಿ ಮನೆಯಲ್ಲಿ ತಮ್ಮನೊಂದಿಗೆ ವಾಸವಾಗಿದ್ದು, ಇವತ್ತು ಶಾಲೆಗೆ ರಜೆ ಮಾಡಿದ್ದ ಎನ್ನಲಾಗಿದೆ.

error: Content is protected !!