ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಬಂಧನ:

 

 

 

 

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಇಂದು ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದರು.

ಇದಕ್ಕೂ ಮುನ್ನ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರಿನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.ಬಂಧನಕ್ಕೆ ಪ್ರತಿರೋಧವೊಡ್ಡಿದ ಹಿನ್ನೆಲೆಯಲ್ಲಿ ಪೊಲೀಸರು ಸಿ.ಟಿ.ರವಿ ಅವರನ್ನು ಹೊತ್ತುಕೊಂಡೇ ತಮ್ಮ ವಾಹನದಲ್ಲಿ ಕರೆದೊಯ್ದರು.

ಸುವರ್ಣ ವಿಧಾನಸೌಧದಲ್ಲಿ ಸಿ.ಟಿ.ರವಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ಖಂಡಿಸಿ ಬಿಜೆಪಿ ನಾಯಕರು ಸೌಧದ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

error: Content is protected !!