ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ..!: ರಾಜ್ಯದ ಹಲವು ಕಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಹಲವು ಕಡೆ 3-4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿದ ಪರಿಣಾಮ ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಕೋಲಾರದಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ.

ಡಿ.24 ಹಾಗೂ ಡಿ.25 ರಂದು ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು. ಮೈಸೂರು ಮಂಡ್ಯ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

error: Content is protected !!