ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು ಪರಿಣಾಮ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ, 23ರಂದು ಮತ್ತು 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಡಿ, 23ರಂದು ಚಾಮರಾಜನಗರ ಮತ್ತು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ಹಾಗೂ ಆಂಧ್ರಪ್ರದೇಶದ ಬಂದರುಗಳಿಗೆ ಹೈ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ವಿಶಾಖ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 26ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಭಾನುವಾರ ಸಮುದ್ರದಲ್ಲಿ ತೀವ್ರ ಕಡಿಮೆ ಒತ್ತಡವು ಸಂಪೂರ್ಣವಾಗಿ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.