ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಅಪಘಾತ: ನಾಲ್ವರಿಗೆ ಗಂಭೀರ ಗಾಯ..!

ಮೂಡಿಗೆರೆ: ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ಟಿಟಿ ವಾಹನವೊಂದು ಅಪಘಾತಗೊಂಡು ನಾಲ್ವರ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಇಂದು (.23) ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆತರುತ್ತಿದ್ದ ಟಿಟಿ ವಾಹನ ಜಾವಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಎಡ ಭಾಗಕ್ಕೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾದರೆ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯರು ಹಾಗೂ ಪೊಲೀಸರ ಸಹಕಾರದಿಂದ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!