ನಟ ಶಿವರಾಜ್‌ಕುಮಾರ್ ಅವರಿಗೆ ಕ್ಯಾನ್ಸರ್ ಇದ್ದ ಹಿನ್ನಲೆ ಅಮೆರಿಕದ ಫ್ಲೋರಿಡಾದ್ಲಿರುವ ಮಿಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ. ಮುರುಗೇಶ್ ನೇತೃತ್ವದಲ್ಲಿ ಸುಮಾರು 6 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು . ಆಪರೇಷನ್ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ‘ದೇವರ ದಯೆಯಿಂದ, ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ’ ಎಂದು ವೈದ್ಯರು ಹೇಳಿದ್ದಾರೆ.
ವೈದ್ಯರಿಂದ ಬಂದ ಮಾಹಿತಿ ತಿಳಿದು ಅಭಿಮಾನಿಗಳು ಮತ್ತು ಕುಟುಂಬಸ್ಥರು ಸಂತೋಷಗೊಂಡಿದ್ದಾರೆ. ಶಿವರಾಜ್‌ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ ಎಂದಾಗಿದೆ.
ಕೆಲ ತಿಂಗಳು ಅವರು ವಿರಾಮ ಪಡೆದು, ಚೇತರಿಸಿಕೊಂಡು ನಟನೆಗೆ ಮರಳುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.