ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿಯ ಯೋಧ ಸಾವು..!

ಚಿಕ್ಕೋಡಿ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿಯ ಯೋಧ ಮಣಿಪುರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.

ಡಿ.23ರ ಮಧ್ಯಾಹ್ನ ಆರು ಜನ ಯೋಧರು ಪ್ರಯಾಣಿಸುತ್ತಿದ್ದ ಸೇನೆಯ 2.5 ಡೈಟನ್ ವಾಹನ ದಾರಿಮಧ್ಯ ಗುಡ್ಡ ಕುಸಿದ ಪರಿಣಾಮ ಪಲ್ಟಿಯಾಗಿತ್ತು. ಈ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನ್ನಪ್ಪಿರುವ ಇಬ್ಬರು ಯೋಧರ ಪೈಕಿ ಓರ್ವ ಯೋಧ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42). ಫೆಬ್ರವರಿ ತಿಂಗಳಲ್ಲಿ ಇವರು ನಿವೃತ್ತಿ ಆಗುವವರಿದ್ದರು. 2002ರಲ್ಲಿ ಸೇನೆಗೆ ಸೇರಿದ್ದ ಅವರು 22 ವರ್ಷ ಸೇವೆ ಸಲ್ಲಿಸಿದ್ದರು. ಹುತಾತ್ಮ ಯೋಧನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಂಗಳವಾರ ಮರಣೋತ್ತರ ಪರೀಕ್ಷೆ ತಡವಾದ ಹಿನ್ನೆಲೆ ಯೋಧ ಧರ್ಮರಾಜ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಸ್ವಗ್ರಾಮ ಕುಪ್ಪಾನವಾಡಿಗೆ ಆಗಮಿಸಲಿದೆ.

ಯೋಧನ ಪಾರ್ಥಿವ ಶರೀರ ಗೋವಾಗೆ ವಿಮಾನದ ಮೂಲಕ ಬಂದು, ಬಳಿಕ ರಸ್ತೆ ಮಾರ್ಗವಾಗಿ ಸ್ವಗ್ರಾಮಕ್ಕೆ ಆಗಮಿಸಲಿದೆ.

error: Content is protected !!