ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 48ರ ತಡಸ ಕ್ರಾಸ್ ಬಳಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಟಾಟಾ ಅಲ್ಟ್ರೋಸ್ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಚಂದ್ರಮ್ಮ (59) ಚಂದ್ರಮ್ಮನ ಮಗಳು ಮೀನಾ (38) ಹರಿಹರ, ಕಾರು ಚಾಲಕ ಹಾಗೂ ಮಾಲೀಕ ಮಹೇಶ್ ಕುಮಾರ್ ಸಿ (41,) ಧನ್ವೀರ್ (11) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.