ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ 9 ಮಂದಿ ಮಾಲಾಧಾರಿಗಳಲ್ಲಿ ಡಿ.26ರಂದು ಇಬ್ಬರು ಕೊನೆಯುಸಿರೆಳೆದಿದ್ದು ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.