ಸಾಂದರ್ಭಿಕ ಚಿತ್ರ
ಬೆಂಗಳೂರು: 2025 ಹೊಸ ವರ್ಷ ಆಚರಣೆಯ ಸಂಭ್ರಮ, ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟವಾಗಿ 2024ರ ಹೊಸವರ್ಷದ ಗಳಿಕೆಗಿಂತೂ ಈ ವರ್ಷದ ಆದಾಯ ಭರ್ಜರಿ ಹೆಚ್ಚಾಗಿದೆ.
ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ.
ಹೊಸ ವರ್ಷ ಆಚರಣೆ ಹಿನ್ನಲೆ ಎರಡು ದಿನ ಹಿಂದಿನಿAದಲೇ ಮದ್ಯ ಮಾರಾಟ ಹೆಚ್ಚಿದ್ದು, ಡಿ.27ರಂದು ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.