ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದ ಸಮೀಪ ನಡೆದಿದೆ.
ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಕೊಡಸೋಗೆ ಸಮೀಪದ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಮುರಿದು ಬಿದ್ದಿದ್ದು ಬೊಮ್ಮಲಾಪುರ ಸೆಸ್ಕ್ ಕಚೇರಿಯಲ್ಲಿ ಅಸಿಸ್ಟೆಂಟ್ ಪವರ್ ಮ್ಯಾನ್ ಆಗಿದ್ದ ಪ್ರತಾಪ್(28) ಹಾಗೂ ಕೊಂಗಳ್ಳಯ್ಯ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಅಭಿ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತೆರಕಣಾಂಬಿ ಠಾಣೆಯಲ್ಲಿ ಈ ಸಂಬAಧ ಪ್ರಕರಣ ದಾಖಲಾಗಿದೆ.