ಬೆಳ್ತಂಗಡಿ: 2025 ಜ.01ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ಹೂವಿನ ಅಲಂಕಾರದಲ್ಲಿ ಶೃಂಗಾರಗೊAಡು ಕಂಗೊಸಿಳಿದ್ದು, ಭಕ್ತಾಧಿಗಳ ಗಮನ ಸೆಳೆದಿದೆ.
ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ), ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ ಹಾಗೂ ವಿವಿಧ ಕಟ್ಟಡಗಳನ್ನು ವಿವಿಧ ಬಗೆಯ ಹೂವುಗಳು, ಅಡಿಕೆ, ತೆಂಗು, ಭತ್ತದ ತೆನೆ, ಮುಸುಂಬಿ, ದಾಳಿಂಬೆ, ಕಬ್ಬು ಮೊದಲಾದ ಒಂದು ಟನ್ ಹಣ್ಣುಗಳನ್ನು ಬಳಸಿ ಅತ್ಯಾಕರ್ಷಕವಾಗಿ ಸಿಂಗರಿಸಿದ್ದಾರೆ.
ಸುಮಾರು 80 ಜನರ ತಂಡ 20 ಲಕ್ಷ ರೂ. ವೆಚ್ಚದಲ್ಲಿ ಅಲಂಕಾರ ಸೇವೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಜ.01ರಂದು ಶ್ರೀ ಕ್ಷೇತ್ರದಲ್ಲಿ ಭಕ್ತಾಧಿಗಳ ಸಂಖ್ಯೆ ಹೆಚ್ಚಿದ್ದು ಸಂಭ್ರಮ-ಸಡಗರ, ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ದೇವಸ್ಥಾನವನ್ನು ಶೃಂಗರಿಸಿದ ತಂಡ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.