ಬೆಳ್ತಂಗಡಿ : ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದ ತಾಲೂಕಿನ ವಿವಿಧೆಡೆ ಸೇತುವೆ ಹಾಗೂ ರಸ್ತೆಗಳು ಹಾನಿಗೊಳಗಾಗಿದ್ದು, ಸದ್ಯ ಅವುಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖೆಯ ಮೂಲಕ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿದೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ – ರೂ.4.00 ಕೋಟಿ
ಧರ್ಮಸ್ಥಳ – ತೋಟತ್ತಾಡಿ – ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.2.00 ಕೋಟಿ
ಪುಯ್ಯ – ಉಳಿಯ – ಕಂಚಿನಡ್ಕ – ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ
ನಾರಾವಿ – ಪಾಣಾಲು – ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ
ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ – ರೂ.3.75 ಕೋಟಿ
ಉಜಿರೆ – ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ – ರೂ.2.50 ಕೋಟಿ ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆ.