ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಸರ್ಕಾರ ನಿರ್ಧಾರ: ಶೆ 15 ರಷ್ಟು ದರ ಪರಿಷ್ಕರಣೆ ಸಂಪುಟ ಸಭೆ ಅನುಮೋದನೆ: ಜ 05 ರಿಂದ ಹೊಸ ದರ ಪರಿಷ್ಕರಣೆ ಅನ್ವಯ:

 

 

 

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸರ್ಕಾರವು ತೀರ್ಮಾನಿಸಿದೆ.
ಈ ಬಗ್ಗೆ ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.‌ ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ.ಈ ಹಿಂದೆ 2015ರಲ್ಲಿ ದರ ಪರಿಷ್ಕರಣೆಯಾಗಿತ್ತು.‌ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ‌.ಗೆ ಹೆಚ್ಚಳವಾಗಿದೆ. ಸಿಬ್ಬಂದಿಯ ವೆಚ್ಚ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಶೇ.15 ದರ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ.

error: Content is protected !!