ಬೆಳ್ತಂಗಡಿ: ಮಾಜಿ ಶಾಸಕ ಕೀರ್ತಿಶೇಷರಾದ ಕೆ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಜ.15 ರಂದು ಶ್ರಿ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ ವಸಂತ ಬಂಗೇರ ಅಭಿಮಾನಿ ಬಳಗದ ಪ್ರದಾನ ಕಾರ್ಯದರ್ಶಿ ಮನೋಹರ್ ಕುಮಾರ್ ಇಳಂತಿಲ ಹೇಳಿದರು.
ಜ.06ರಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ರಿ, ಬೆಳ್ತಂಗಡಿ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಶಿಬಿರ ನಡೆಯಲಿದ್ದು ಬಂಗೇರ ಅಭಿಮಾನಿಗಳು, ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡಲಿದ್ದು, ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ವಸಂತ ಬಂಗೇರರ ಕುರಿತು ರಾಣಿ ಅಬ್ಬಕ್ಕ ತುಳು ಅದ್ಯಯನ ಪೀಠ ಬಂಟ್ವಾಳ ಇದರ ಮುಖ್ಯಸ್ಥ ಡಾ ತುಕರಾಮ ಪೂಜಾರಿ ಇವರಿಂದ ವಿಶೇಷ ಉಪನ್ಯಾಸ ನಡೆಯಲಿದೆ. ಮತ್ತು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಿದೆ. ಸಮಿತಿ ವತಿಯಿಂದ ದಯಾ ವಿಷೇಶ ಶಾಲೆಯ ಮಕ್ಕಳಿಗೆ ಊಟದ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಮಾಯಿಲತ್ತೋಡಿ, ಕೋಶಾದಿಕಾರಿ ಶೇಖರ್ ಕುಕ್ಕೇಡಿ, ಉಪಾದ್ಯಕ್ಷ ಲೋಕೇಶ್ ಗೌಡ, 75 ಹುಟ್ಟು ಹಬ್ಬ ಆಚರಣಾ ಸಮಿತಿಯ ಪ್ರದಾನ ಸಂಚಾಲಕ ದೇವಿಪ್ರಸಾದ್, ಅಭಿಮಾನಿಗಳಾದ ಲಕ್ಮಣ ಗೌಡ, ಯಶೋದರ ಬಂಗೇರ ಚಾರ್ಮಾಡಿ, ಅಶ್ರಪ್ ನೆರಿಯ, ಬೆಳ್ತಂಗಡಿ ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅದ್ಯಕ್ಷ ಜಯವಿಕ್ರಮ ಕಲ್ಲಾಪು ಉಸ್ಥಿತರಿದ್ದರು.