ನಾಗ್ಪುರ : ಮದುವೆ ಉಡುಪು ಧರಿಸಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಾಗ್ಪುರದ ಜಾರಿಪಟ್ಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪತಿ ಜೆರಿಲ್ ಮ್ಯಾನ್‌ಕ್ರೀಪ್ ಬಾಣಸಿಗ ವೃತ್ತಿ ಮಾಡುತ್ತಿದ್ದರೆ, ಪತ್ನಿ ಆನ್ನೆ ಮ್ಯಾನ್‌ಕ್ರೀಪ್ ಗೃಹಿಣಿಯಾಗಿದ್ದರು. ಕೌಟುಂಬಿಕ ಪರಿಸ್ಥಿತಿ ಮತ್ತು ಹಣಕಾಸಿನ ಸಮಸ್ಯೆಯಿಂದಾಗಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋದಲ್ಲಿ “ನಮ್ಮ ಮೇಲೆ ಯಾರೂ ಒತ್ತಡ ಹಾಕಿಲ್ಲ. ಸಾವಿಗೆ ಯಾರೂ ಕಾರಣರಲ್ಲ. ಕೌಟುಂಬಿಕ ಪರಿಸ್ಥಿತಿ ಮತ್ತು ಹಣಕಾಸಿನ ಸಮಸ್ಯೆಯಿಂದಾಗಿ ನಾವು ಪ್ರಾಣ ಕಳೆದುಕೊಳ್ಳುತ್ತಿದ್ದೇವೆ” ಎಂದು ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಿ ಪೊಲೀಸರು ಘಟನಾ ಸ್ಥಳ ಪರಿಶೀಲನೆ ನಡೆಸಿದಾಗ, ದಂಪತಿ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 6 ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಮದುವೆಯ ದಿನ ಧರಿಸಿದ್ದ ಉಡುಪಿನಲ್ಲೇ ಸಂಭ್ರಮ ಆಚರಿಸಿದ್ದಾರೆ. ಬಳಿಕ ಇಬ್ಬರೂ ಅದೇ ಉಡುಗೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.