ರಾಮನಗರ: ಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿ ತಂದೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ರಾಮನಗರದ ಅಚಲು ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ಕನಕಪುರ-ರಾಮನಗರ ಹೆದ್ದಾರಿಯಲ್ಲಿನ ಅಚಲು ಗ್ರಾಮದ ಸಮೀಪ ಟಿವಿಎಸ್ ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮಗ, ಮಗಳು ಹಾಗೂ ತಂದೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಗೂ ಗಂಭೀರ ಗಾಯಗಳಾಗಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರಾಗಿದ್ದು, ರಾಮನಗರ ತಾಲೂಕಿನ ದಾಸೇಗೌಡನದೊಡ್ಡಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.