ಚಿಕ್ಕಮಗಳೂರು: ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಂ ಎದುರು ಕರ್ನಾಟಕದ ನಾಲ್ವರು, ಹೊರ ರಾಜ್ಯದ ಇಬ್ಬರು ನಕ್ಸಲರು ಶರಣಾಗಿದ್ದಾರೆ. ಆದರೆ ನಕ್ಸಲರ ಪಟ್ಟಿಯಲ್ಲಿದ್ದ ಏಕೈಕ ನಕ್ಸಲ್ ರವೀಂದ್ರ ಮಾತ್ರ ಉಳಿದುಕೊಂಡಿದ್ದಾರೆ.
8 ನಕ್ಸಲರ ಪೈಕಿ ಇತ್ತೀಚೆಗೆ ವಿಕ್ರಂಗೌಡ ಎನ್‌ಕೌಂಟರ್ ಮಾಡಲಾಗಿತ್ತು, ಬಳಿಕ ಇದ್ದ 7 ಜನರ ಪೈಕಿ ನಿನ್ನೆ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಆದರೆ ನಕ್ಸಲ್ ರವೀಂದ್ರ ಮಾತ್ರ ಶರಣಾಗಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ರವೀಂದ್ರ ನಕ್ಸಲ್ ಶರಣಾಗತಿ ಕಮಿಟಿ ಸಂಪರ್ಕಕ್ಕೂ ಸಿಕ್ಕಿಲ್ಲ. ಕಳೆದ 18 ವರ್ಷಗಳಿಂದ ಭೂಗತವಾಗಿರುವ ನಕ್ಸಲ್ ರವೀಂದ್ರ ವಿರುದ್ಧ 14 ಕೇಸ್‌ಗಳಿವೆ.
ಶರಣಾಗತಿಯಾದ 6 ನಕ್ಸಲರಾದ ಮುಂಡಗಾರು ಲತಾ, ಜಯಣ್ಣ, ಸುಂದರಿ, ವನಜಾಕ್ಷಿ, ಜೀಶಾ, ವಸಂತ ಅಲಿಯಾಸ್ ರಮೇಶ್‌ನಿಂದ ಕೂಡ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್‌ರಿAದ ಮಾಹಿತಿ ಸಂಗ್ರಹ ಮಾಡಲಾಗಿದೆ. ಶರಣಾಗತಿ ವೇಳೆ ನಕ್ಸಲರು ಶಸ್ತ್ರಾಸ್ತ್ರಗಳನ್ನು ಸರೆಂಡರ್ ಮಾಡಿದ್ದಾರೆ. ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.