ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡ 7 ನೇ ತರಗತಿ ಬಾಲಕ

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿಯ ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾಗಿದ್ದಾರೆ.

ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

error: Content is protected !!