ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ಇಂದು ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಚನ: ನಿಗದಿತ ಸಮಯ ಬದಲಾವಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಇಂದು ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

ತುರ್ತುಕಾರ್ಯಕ್ರಮಗಳ ನಿಮಿತ್ತ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ಆಗಮಿಸಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದು, ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದು ಎಂದಿದ್ದಾರೆ.

error: Content is protected !!