ಪಿಲಿಕುಳದಲ್ಲಿ ಕಂಬಳ ನಡೆಸುವುದಕ್ಕೆ ಪ್ರಾಣಿಪ್ರಿಯರ ವಿರೋಧ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

ಬೆಂಗಳೂರು: ಪಿಲಿಕುಳದಲ್ಲಿ ಕಂಬಳ ನಡೆಸುವುದಕ್ಕೆ ಪ್ರಾಣಿಪ್ರಿಯರಿಂದ ವಿರೋಧ ವ್ಯಕ್ತವಾಗಿದ್ದು ಪ್ರಾಣಿ ದಯಾ ಸಂಘಟನೆ ಪೇಟಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಜನವರಿ 21ಕ್ಕೆ ಮುಂದೂಡಿತು.

ಪಿಲಿಕುಳ ಜೈವಿಕ  ಪಾರ್ಕ್‌ನ ಸಮೀಪ ಕಂಬಳಕ್ಕೆ ಅವಕಾಶ ನೀಡಬಾರದು ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹೊರಗೂ ಕಂಬಳ ನಿಷೇಧ ಮಾಡಬೇಕು ಎಂಬ ಮನವಿ ಇವರದ್ದಾಗಿದ್ದು ಶುಕ್ರವಾರ ಪ್ರಕರಣದ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾ| ಎಂ.ಐ. ಅರುಣ್ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಬಂದ ಸಂದರ್ಭ, ರಾಜ್ಯ ಸರಕಾರದ ಪರ ಹಾಜರಾದ ವಕೀಲರು, ಅಡ್ವೋ ಕೇಟ್ ಜನರಲ್ ಅವರು ಲಭ್ಯರಿಲ್ಲ, ಆದ್ದರಿಂದ ವಿಚಾರಣೆಯನ್ನು ಮುಂದೂಡುವಂತೆ ನ್ಯಾಯಲಯವನ್ನು ಕೋರಿದರು.

error: Content is protected !!