“ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು: ಇಲ್ಲದಿದ್ದರೆ ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರ್” ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಬೆದರಿಕೆ ಪತ್ರ

ಚಿಕ್ಕಮಗಳೂರು: ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತ್ರದಲ್ಲಿ “15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ” ಎಂಬ ಬೆದರಿಕೆ ಹಾಕಲಾಗಿದೆ.

ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ ಬಂದಿದೆ.

error: Content is protected !!