ಕಬ್ಬಿಣದ ರಾಡ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಸಂಭವಿಸಿದೆ.
ಟೆಂಪೋದಲ್ಲಿ 16 ಮಂದಿ ಪ್ರಯಾಣಿಕರಿದ್ದರು. ನಿಫಾಡ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಕಾರ್ಯಾಚರಣೆ ಆರಂಭಿಸಿ, ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.