ಇತಿಹಾಸ ಪ್ತಸಿದ್ದ ಕುವೆಟ್ಟು ಗ್ರಾಮದ ಗುರುವಾಯನಕೆರೆ ಅರಮಲೆ ಬೆಟ್ಟ ಕೊಡಮಣಿತ್ತಾಯಿ ಕ್ಷೇತ್ರದಲ್ಲಿ ಫೆಬ್ರವರಿ 9 ರಿಂದ 12ವರೆಗೆ ವಿಜೃಂಭಣೆಯಿಂದ ಬ್ರಹ್ಮ ಕುಂಭಾಭಿಷೇಕ ನಡೆಯಲಿದ್ದು , ಉದ್ಯಮಿ ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯಕೆರೆ ಇವರು ಅಭಿವೃದ್ಧಿ ಕಾಮಗಾರಿಗಳಿಗೆ ರೂ 50 ಲಕ್ಷ ದೇಣಿಗೆ ನೀಡಿದ್ದಾರೆ.ಈಗಾಗಲೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ.ಬ್ರಹ್ಮ ಕುಂಭಾಷೇಕದ ಆಮಂತ್ರಣ ಪತ್ರವನ್ನು ಜ 14 ರ ಮಕರ ಸಂಕ್ರಮಣದಂದು ಕ್ಷೇತ್ರದ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.ಕಾರ್ಯಾಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸುಕೇಶ್ ಕುಮಾರ್, ಸುನೀಶ್ ಕುಮಾರ್, ಕಾರ್ಯದರ್ಶಿ ಪುರಂದರ ಶೆಟ್ಟಿ ಪಾಡ್ಯಾರು,ಕೋಶಾಧಿಕಾರಿ ಪ್ರದೀಪ್ ಶೆಟ್ಟಿ ಶಕ್ತಿನಗರ, ಸೇರಿದಂತೆ ಊರಿನ ಪರವೂರಿನ ಗ್ರಾಮಸ್ಥರು ಉಪಸ್ಥಿತರಿದ್ದರು.