ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದೆ. ಕಳೆದ ವರ್ಷ 132 ಜನರಲ್ಲಿ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿದ್ದ ಈ ಕಾಯಿಲೆ ಮತ್ತೆ ಗಾಯದ ಮೇಲೆ ಬರೆ ಎಂಬಂತೆ ಮಾಡಿದೆ.
ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕ ತೀವ್ರ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಯುವಕನ ರಕ್ತ ಪರೀಕ್ಷೆ ನಡೆದಿದ್ದು, ಮಂಗನ ಕಾಯಿಲೆ ದೃಢವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಮಹಾಮಾರಿ ರೋಗ ತೀವ್ರ ಸ್ವರೂಪ ಪಡೆಯದಂತೆ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಸುತ್ತಮುತ್ತಲಿನ ಗ್ರಾಮದಲ್ಲಿ DMPA ತೈಲ ಸೇರಿದಂತೆ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದ್ದು, ಅರಣ್ಯಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದೆ.
ಜಿಲ್ಲಾದ್ಯಂತ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.