ದೈಹಿಕ ಸಂಪರ್ಕಕ್ಕೆ ಪೀಡಿಸಿದ ಮಾವ: ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ.!

ಬೆಂಗಳೂರು: ದೈಹಿಕ ಸಂಪರ್ಕಕ್ಕೆ ಪೀಡಿಸಿದಕ್ಕೆ 25 ವರ್ಷದ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಕರೆದಿದ್ದಾನೆ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಯುವತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!