ಹೈದರಾಬಾದ್/ಬೀದರ್: ಬೀದರ್‌ನಲ್ಲಿ ಎಟಿಎಂ ಹಣ ದೋಚಿಕೊಂಡು ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ.
ಜ.16ರಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಎಟಿಎಂಗೆ ಹಣ ತುಂಬಿಸಲು ಬ್ಯಾಂಕ್ ಸಿಬ್ಬಂದಿ ತೆರಳಿದ್ದಾಗ, ದರೋಡೆಕೋರರು ಗುಂಡು ಹಾರಿಸಿ ಓರ್ವನನ್ನು ಕೊಂದು ಹಣದ ಸಮೇತ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬೆನ್ನುಬಿದ್ದಿದ್ದ ಪೊಲೀಸರು, ಸುಳಿವು ಆಧರಿಸಿ ಹೈದರಾಬಾದ್‌ನಲ್ಲಿ ಶೋಧ ನಡೆಸಿ ಕಳ್ಳರನ್ನು ಸೆರೆ ಹಿಡಿದಿದ್ದಾರೆ. ಈ ವೇಳೆ ಅಲ್ಲಿಯೂ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಬಸ್ ಟ್ರಾವೆಲ್ ಮ್ಯಾನೇಜರ್ ಗಾಯಗೊಂಡಿದ್ದಾರೆ.
ಬೀದರ್‌ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್ ಮೂಲಕ ಛತ್ತೀಸ್‌ಗಢದ ರಾಯಪುರಕ್ಕೆ ಪರಾರಿಯಾಗಲು ಯೋಜನೆ ಮಾಡುಕೊಂಡಿದ್ದರು. ಇದಕ್ಕಾಗಿ ಮೂವರು ದುಷ್ಕರ್ಮಿಗಳು ಖಾಸಗಿ ಬಸ್ ಟ್ರಾವೆಲ್‌ನಲ್ಲಿ ಟಿಕೆಟ್ ಕಾಯ್ದಿರಿಸಿದ್ದರು. ಸಂಜೆ 7.30 ಕ್ಕೆ ಬಸ್ ಹೊರಡಬೇಕಿತ್ತು. ಅದಕ್ಕೂ ಮೊದಲು ಆರೋಪಿಗಳನ್ನು ಟ್ರಾವೆಲ್ ಏಜೆನ್ಸಿ ಅವರನ್ನು ಪಿಕಪ್ ಮಾಡಿದ್ದಾರೆ. ಈ ವೇಳೆ ಆರೋಪಿಗಳ ಲಗೇಜ್ ಅನ್ನು ಬಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್‌ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡು ಬಂದಿದೆ. ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ. ಈ ವೇಳೆ, ಅದೇ ಪಿಕಪ್ ವ್ಯಾನ್‌ನಲ್ಲಿ ಇದ್ದ ಕರ್ನಾಟಕ ಪೊಲೀಸರು ಇದನ್ನ ಗಮನಿಸಿದ್ದಾರೆ.
ಪೊಲೀಸರು ಎಂದು ತಿಳಿದ ತಕ್ಷಣವೇ ಆರೋಪಿಗಳು ತಮ್ಮ ಬ್ಯಾಗ್‌ನಲ್ಲಿದ್ದ ಬಂದೂಕುಗಳಿAದ ಗುಂಡು ಹಾರಿಸಿದ್ದಾರೆ. ಇದರಿಂದ ಟ್ರಾವೆಲ್ ಏಜೆನ್ಸಿ ಮ್ಯಾನೇಜರ್ ಹೊಟ್ಟೆಗೆ ಬುಲೆಟ್ ಹೊಕ್ಕಿದೆ. ಸ್ಥಳದಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ. ಪೊಲೀಸರು ಹರಸಾಹಪಟ್ಟು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
ನಗರದ ಪೂರ್ವ ವಲಯ ಡಿಸಿಪಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ತಪ್ಪಿಸಿಕೊಂಡವರ ಬಂಧನಕ್ಕೆ ಹೈದರಾಬಾದ್ ಪೊಲೀಸರು ತೀವ್ರ ಪ್ರಯತ್ನ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ದುಷ್ಕರ್ಮಿಗಳಿಂದ ಲೂಟಿ ಮಾಡಿದ್ದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿ ಅಫ್ಜಲ್‌ಗಂಜ್ ಪೊಲೀಸರ ವಶದಲ್ಲಿದ್ದಾನೆ.