ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ: ಮುಂಡ್ರುಪ್ಪಾಡಿ ನಿವಾಸಿ ಮಿಥುನ್ ಕರ್ಕೇರ ಸಾವು..!

ಬೆಳ್ತಂಗಡಿ: ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿರುವ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಜ.16ರಂದು ತಡರಾತ್ರಿ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ (25) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿದ್ದು, ಪರಿಣಾಮ ಮಿಥುನ್ ಕರ್ಕೇರ ರಸ್ತೆಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ ಸ್ಥಳೀಯರು ಆತನನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗಿದೆ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

error: Content is protected !!