ಉಳ್ಳಾಲ: ಟೆಂಪೋ-ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜ.17ರ ಶುಕ್ರವಾರದಂದು ಬೆಳಿಗ್ಗೆ ಸಂಭವಿಸಿದೆ.
ಮುಡಿಪು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಏಸ್ ಟೆಂಪೋ , ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಖ್ ರಝ್ವಿ (22) ಮೃತಪಟ್ಟಿದ್ದಾರೆ. ಟೆಂಪೋ ಚಾಲಕ ಗಾಯಗೊಂಡಿದ್ದಾರೆ.
ಅಬೂಬಕರ್ ಸಿದ್ದೀಖ್ ಕಾಸರಗೋಡಿನಲ್ಲಿ ಅರಬಿಕ್ ಶರೀಅತ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.