ಕೊಟ್ಟಿಗೆಹಾರ: ಶತಾಯುಷಿ ಅಜ್ಜಿಯ ಮೊಮ್ಮಗ, 35 ವರ್ಷದ ಯುವ ಕೃಷಿಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದಲ್ಲಿ ಸಂಭವಿಸಿದೆ.
ಬಿಜೆಪಿಯ ಯುವ ಮುಖಂಡ ಹೆಚ್. ಆರ್. ಚೇತನ್ (35) ಅವರು ಗುರುವಾರ ಮನೆಯೆದುರು ಕಾಫಿ ಕಣದಲ್ಲಿದ್ದಾಗ ಇದ್ದಕ್ಕಿದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಆಸ್ಪತ್ರೆಗೆ ಹೋಗುವ ದಾರಿಮಧ್ಯದಲ್ಲಿಯೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮೃತ ಚೇತನ್ ಅವರು ಕೂವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಗೌಡ ಅವರ ಏಕೈಕ ಪುತ್ರ. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಸಾರ್ವಜನಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಸ್ನೇಹಜೀವಿಯಾಗಿದ್ದ ಚೇತನ್ ಬಾಳಿಬದುಕಬೇಕಾದ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಸ್ನೇಹಿತರು, ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
ಚೇತನ್, ಪತ್ನಿ, ಇಬ್ಬರು ಇಬ್ಬರು ಚಿಕ್ಕ ಮಕ್ಕಳು, ತಂದೆ ತಾಯಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.