ಉಜಿರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯು ಜ.20ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
ಅರ್ಹ ಅಭ್ಯರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ತಾಲೂಕು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಸದಸ್ಯ ಕಾರ್ಯದರ್ಶಿ ಹಾಗೂ ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.
2023 ಮತ್ತು 2024ರ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ತೇರ್ಗಡೆಯಾಗಿ ನಿರುದ್ಯೋಗಿಯಾಗಿರುವವರು ಅರ್ಜಿ ಸಲ್ಲಿಸಬಹುದು.
ನೋಂದಣಿಯಾದ ಅರ್ಹ ಪದವೀಧರರಿಗೆ ಮಾಹೆಯಾನ ರೂ. 3000/- ಮತ್ತು ಡಿಪ್ಲೋಮ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ರೂ. ಗಳನ್ನು ನಿರುದ್ಯೋಗ ಭತ್ಯೆಯಾಗಿ ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುವುದು.
ನೋಂದಣಿ ಮಾಡಿಸಲು ಅಗತ್ಯವಿರುವ ದಾಖಲೆಗಳ ವಿವರಗಳು
* ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ( ಮೊಬೈಲ್ ಫೋನ್)
* ಇಮೇಲ್ ಐ ಡಿ
• ಎಸ್ ಎಸ್ ಲ್ ಸಿ, ಪಿ ಯು ಸಿ, ಪದವಿ/ ಡಿಪ್ಲೋಮ/ ಸ್ನಾತಕೋತ್ತರ ಒರಿಜಿನಲ್ ಸರ್ಟಿಫಿಕೇಟ್
•ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು
•ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿರಬೇಕು.