ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್: ಆರೋಪಿ ಅರೆಸ್ಟ್: ವಿಚಾರಣೆ ವೇಳೆ ಪೊಲೀಸರಿಗೆ ಶಾಕ್: 10ಕ್ಕೂ ಹೆಚ್ಚು ಮಹಿಳೆಯರ ನಗ್ನ ವಿಡಿಯೋ ಮೊಬೈಲ್ ನಲ್ಲಿ ಸೆರೆ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯರು ಸೇರಿದಂತೆ 10ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಕಸಬಾಪೇಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಶರಾವತಿ ನಗರದ ಕೆಇಬಿ ಲೇಔಟ್ ನಿವಾಸಿಯಾಗಿರುವ ಅಶ್ಪಾಕ್ ಜೋಗನ್‌ಕೊಪ್ಪ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಝರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಅಂಗಡಿ ಇಟ್ಟುಕೊಂಡಿದ್ದಾನೆ. ತನ್ನ ಅಂಗಡಿಗೆ ಬರುವ ಬಡ ಹೆಣ್ಣುಮಕ್ಕಳ ಜೊತೆ ಬಣ್ಣ ಬಣ್ಣದ ಮಾತುಗಳನ್ನು ಆಡಿ, ಮರುಳು ಮಾಡಿ ಬಳಿಕ, ಅವರಿಗೆ ಹಣದಾಸೆ ತೋರಿಸಿ ಪ್ರೀತಿಸುವ ನಾಟಕವಾಡುತ್ತಿದ್ದನು. ನಂತರ, ಪ್ರೀತಿಯ ಹೆಸರಿನಲ್ಲಿ ಮಂಚಕ್ಕೆ ಕರೆಯುತ್ತಿದ್ದನು. ಅಲ್ಲಿ, ಖಾಸಗಿ ಕ್ಷಣಗಳ ದೃಶ್ಯಗಳನ್ನು ಮೊಬೈಲ್ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಳುತ್ತಿದ್ದನು. ಈ ರಾಸಲೀಲೆಯ ವಿಡಿಯೋಗಳನ್ನು ಮತ್ತು ಇಟ್ಟುಕೊಂಡು “ನಾನು ಹೇಳಿದಂತೆ ಕೇಳು” ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು.

ಆರೋಪಿ ಈ ರೀತಿಯಾಗಿ 10ಕ್ಕೂ ಹೆಚ್ಚು ಮಹಿಳೆಯರ ಮತ್ತು ಅಪ್ರಾಪ್ತ ಬಾಲಕಿಯರ ಜೊತೆ ಚೆಲ್ಲಾಟವಾಡುತ್ತಿದ್ದಾನೆ. ಇಷ್ಟಕ್ಕೇ ಸುಮ್ಮನಾಗದ ಆರೋಪಿ ಆಶ್ಪಕ್ ಮಹಿಳೆಯರಿಗೆ ವಿಡಿಯೋ ಕರೆ ಮಾಡಿ, ಖಾಸಗಿ ಅಂಗಾಂಗಳನ್ನು ತೋರಿಸುವಂತೆ ಹೇಳುತ್ತಿದ್ದನು. ಮಹಿಳೆಯರು ನಗ್ನವಾದ ಬಳಿಕ, ಸ್ಕ್ರೀನ್ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಈತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯ ಪೋಷಕರು ಅಶ್ಪಾಕ್ ಜೋಗನ್‌ಕೊಪ್ಪ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನಲೆ ಆರೋಪಿಯನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಅಶ್ಪಾಕ್ ಜೋಗನ್‌ಕೊಪ್ಪ ಮೊಬೈಲ್‌ನಲ್ಲಿ 10ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಆಡಿದ ರಾಸಲೀಲೆಯ ವಿಡಿಯೋಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!