ತಾಲೂಕು ಯುವಜನ ಒಕ್ಕೂಟದಿಂದ ದಿ.ಹರಿಪ್ರಸಾದ್ ಹೊಸಂಗಡಿ ಅವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿ ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷರಾದ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷರಾದ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

error: Content is protected !!