ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಚಳಿಯ ವಾತಾವರಣವಿದ್ದು, ಮುಂದಿನ ವಾರ ಒಂದು ದಿನ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನದ ಹಿಂದೆ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಸದ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ, ಇಂದಿನಿಂದ ಕೊಂಚ ಮೋಡ ಕವಿದ ವಾತಾವರಣವಿರಲಿದೆ.
ಮುಂದಿನ ವಾರಂತ್ಯದ ವೇಳೆಗೆ ಕರ್ನಾಟಕದಲ್ಲಿ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.