ಮಂಗಳೂರು: ಮಸಾಜ್ ಪಾರ್ಲರ್ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜ.23ರಂದು ಮಂಗಳೂರಿನ ಬಿಜೈನಲ್ಲಿರುವ ಮಸಾಜ್ ಪಾರ್ಲರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನಾ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಬಗ್ಗೆ ಮಸಾಜ್ ಪಾರ್ಲರ್ ಮಾಲೀಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದಾಳಿಯ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್ ಸಿ ನ್ಯಾಯಾಲಯ ಫೆ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.
14 ಮಂದಿ ಆರೋಪಿಗಳಲ್ಲಿ ಜಾಮೀನು ಅರ್ಜಿ ಸಲ್ಲಿಸದ ಮೂರು ಮಂದಿ ಆರೋಪಿಗಳನ್ನು ಹೊರತುಪಡಿಸಿ ನ್ಯಾಯಾಲಯವು 11 ಮಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.