7 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಫೆ.05ರಂದು ನಡೆದಿದೆ.
ಬುಧವಾರ ಬಾಲಕಿಯನ್ನು ಖಾಸಗಿ ಶಾಲೆಯಿಂದ ಕರೆದೊಯ್ದು ಆರೋಪಿ ಅತ್ಯಾಚಾರ ಎಸಗಿದ್ದು, ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಆರೋಪಿ ಮತ್ತು ಶಾಲೆಯ ಆಡಳಿತ ಮಂಡಳಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾನವಿ ಪೊಲೀಸ್ ಠಾಣಾ ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.