ಬೆಳ್ತಂಗಡಿ : ಸ್ವಾಮಿ ವಿವೇಕಾನಂದರ 163ನೇ ಜನ್ಮ ಜಯಂತಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ವಿವೇಕಾನಂದರ ಜೀವನ ವ್ಯಕ್ತಿತ್ವ’ದ ಕುರಿತು ಪ್ರಬಂಧ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ತಾಲೂಕಿನ ಪ್ರೌಢಶಾಲಾ ವಿಭಾಗದ ಮಕ್ಕಳು ಭಾಗವಹಿಸಿದ್ದು ಪ್ರಥಮ ಸ್ಥಾನವನ್ನು ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ವಿದ್ಯಾರ್ಥಿನಿ ಕುಮಾರಿ ನಿಷಿತಾ, ದ್ವಿತೀಯ ಸ್ಥಾನವನ್ನು ಮರಿ ಶ್ರೇಯಾ ರೋಸ್ಲಿನ್ ಸೈಂಟ್ ಮೇರಿ ಪ್ರೌಢಶಾಲೆ ಲಾಯಿಲ ಇವರು ಪಡೆದುಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಅವರು ಮಾತನಾಡಿ, ಮಕ್ಕಳು ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವುದರ ಮೂಲಕ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿವೇಕಾನಂದ ಸೇವಾಶ್ರಮ ಬೆಳ್ತಂಗಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ವಿ ಶೆಟ್ಟಿ ಸವಣಾಲು, ಸಂಚಾಲಕರಾದ ಸುದೀಪ್ ಶೆಟ್ಟಿ, ಉಪಾಧ್ಯಕ್ಷರಾದ ಗಿರೀಶ್ ಡೊಂಗ್ರೆ, ಕಾರ್ಯದರ್ಶಿಗಳಾದ ಯಶವಂತ್ ದೇವಾಡಿಗ ವೇಣೂರು ಹಾಗೂ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಗಣೇಶ್ ಭಂಡಾರಿ, ನಿರ್ದೇಶಕರಾದ ಅಶೋಕ್ ರೈ ಉಪಸ್ಥಿತರಿದ್ದರು.