ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ: ಪೋಕ್ಸೊ ಪ್ರಕರಣ ದಾಖಲು: ಮೂವರು ಶಿಕ್ಷಕರ ಬಂಧನ

ಸಾಂದರ್ಭಿಕ ಚಿತ್ರ

ಸರ್ಕಾರಿ ಶಾಲೆಯ 13 ವರ್ಷದ ಬಾಲಕಿ ಮೇಲೆ ಮೂವರು ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜ.2ರಂದು  ಶಾಲೆಯ ಶೌಚಾಲಯದಲ್ಲಿ ಮೂವರು ಶಿಕ್ಷಕರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಮೂವರು ಶಿಕ್ಷಕರನ್ನು ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಅಮಾನತುಗೊಳಿಸಿದ್ದಾರೆ. ಆರೋಪಿ ಶಿಕ್ಷಕರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಬಂಧಿಸಿದ್ದು, 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

error: Content is protected !!