ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ. 09 ರಿಂದ 13ರರವರೆಗೆ ಬ್ರಹ್ಮಕುಂಭಾಭಿಷೇಕ ನಡೆಯಲಿದ್ದು ಇಂದು (ಫೆ. 07) ಕಾರ್ಯಾಲಯ ಉದ್ಘಾಟನೆಗೊಳ್ಳಲಿದೆ.
ಬೆಳಗ್ಗೆ 9:23ಕ್ಕೆ ರಾಜೇಶ್ ಶೆಟ್ಟಿ ನವಶಕ್ತಿ, ಶಕ್ತಿನಗರ ಇವರು ಉದ್ಘಾಟನೆ ನೆರವೇರಿಸಲಿದ್ದಾರೆ. ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ನವಶಕ್ತಿ ಇವರ ಅಧ್ಯಕ್ಷತೆಯಲ್ಲಿ 5 ದಿನ ಬ್ರಹ್ಮಕುಂಭಾಭಿಷೇಕ ನಡೆಯಲಿದ್ದು ಈಗಾಗಲೇ ಸಕಲ ಸಿದ್ಧತೆಗಳಾಗಿದೆ.
ಫೆ.09 ರಂದು ಸಂಜೆ 05 ಗಂಟೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.