ಬೆಂಗಳೂರು: ಗೂಗಲ್ ಮ್ಯಾಪ್ ನೋಡಿಕೊಂಡು ಹೋಗಿ ವೈದ್ಯರೊಬ್ಬರು ದುರಂತ ಸಾವು ಕಂಡ ಘಟನೆ ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 648 ಸಂಭವಿಸಿದೆ.
ಹೈದ್ರಾಬಾದ್ ಮೂಲದ ಅಮರ್ ಪ್ರಸಾದ್, ವೇಣು ಮತ್ತು ಪ್ರವಳಿಕಾ ಎಂಬ ಮೂವರು ಸ್ನೇಹಿತರು ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಹೋಗಲು ಕಾರಿನಲ್ಲಿ ಬಂದಿದ್ದು, ಈ ವೇಳೆ ಚಾಲಕ ಗೂಗಲ್ ಮ್ಯಾಪ್ ನೋಡುತ್ತ ಕಾರು ಚಾಲನೆ ಮಾಡಿದ್ದಾರೆ. ಚಾಲಕ ಮ್ಯಾಪ್‌ನತ್ತಲೇ ಹೆಚ್ಚು ಗಮನಹರಿಸಿದ್ದರಿಂದ ಹೈವೆಯಲ್ಲಿ ವೇಗವಾಗಿ ಬಂದಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರ್‌ನ ಹಿಂಭಾಗದಲ್ಲಿ ಕೂತಿದ್ದ ಹೈದರಾಬಾದ್ ಮೂಲದ ವೈದ್ಯ ಅಮರ್ ಪ್ರಸಾದ್ ಸ್ಥಳದಲ್ಲೆ ಸಾವನ್ನಪಿದ್ದಾರೆ.
ಘಟನಾ ಸ್ಥಳದಲ್ಲಿದ್ದವರು ಕಾರ್‌ನಲ್ಲಿದ್ದ ವೈದ್ಯೆ ಪ್ರವಳಿಕಾ ಮತ್ತು ವೇಣು ಎಂಬವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಸಣ್ಣಪುಟ್ಟ ಗಾಯದೊಂದಿಗೆ ಇಬ್ಬರು ಬದುಕುಳಿದಿದ್ದಾರೆ.