ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತ ಗಿರಿ ದಿನೇಶ್ (45) ಸಾವನ್ನಪ್ಪಿದ್ದಾರೆ.
ನವಗ್ರಹ ಚಿತ್ರದಲ್ಲಿ ಶೆಟ್ಟಿ ಪಾತ್ರ ನಿರ್ವಹಿಸಿದ ಗಿರಿ ದಿನೇಶ್ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ¸ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ, ದಾರಿ ಮಧ್ಯೆಯೇ ನಿಧನರಾಗಿದ್ದಾರೆ.
ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ಅವರು ನಟಿಸಿದ್ದರು. ಆದರೆ, ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು.