ಬೆಳ್ತಂಗಡಿ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾಯನಕೆರೆಯಲ್ಲಿ ಸಂಜೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಹೋಗುತಿದ್ದ ವೇಳೆ ಗುರುವಾಯನಕೆರೆ ಸಮೀಪ ರಸ್ತೆ ವಿಭಾಜಕಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಮರೋಡಿ ನಿವಾಸಿ ಎಂದು ಹೇಳಲಾಗುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.