ಸರಕಾರಿ ಬಸ್ಸಿನಲ್ಲಿ ಟಿಕೆಟ್ ರಹಿತ ಪ್ರಯಾಣ: 3621 ಪ್ರಯಾಣಿಕರಿಂದ 6.86 ಲಕ್ಷ ರೂ. ದಂಡ ವಸೂಲಿ!

ಸಾಂದರ್ಭಿಕ ಚಿತ್ರ

ಬೆಂಗಳೂರು: ಸರಕಾರಿ ಬಸ್ಸಿನಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 3621 ಜನರಿಗೆ ದಂಡ ವಿಧಿಸಲಾಗಿದೆ.

ಜನವರಿ ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಒಟ್ಟು 6.86 ಲಕ್ಷರೂ ದಂಡ ವಸೂಲಿ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ತಪಾಸಣೆ ನಡೆಸಿ ನಿಗಮದ ಆದಾಯದಲ್ಲಿ ರೂ. 94,284 ಸೋರಿಕೆ ಪತ್ತೆ ಹಚ್ಚಿದ್ದರು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಟಿಕೆಟ್ ಅಥವಾ ಬಸ್ ಪಾಸ್ ಪಡೆದೇ ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!