ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದ್ದು, ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢ ಪಟ್ಟಿದೆ.
ಕೊಪ್ಪ ಮತ್ತು ಎನ್‌ಆರ್ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್‌ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದೆ.
ದಿನದಿಂದ ದಿನಕ್ಕೆ ಕೆಎಫ್‌ಡಿ ಹೆಚ್ಚುತ್ತಲೇ ಇದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೆ.ಎಫ್.ಡಿ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿತ್ತು. ಬಳಿಕ ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ ಖಾಯಿಲೆ ಕಾಣಿಸಿಕೊಂಡಿತ್ತು.