ಸಾಂದರ್ಭಿಕ ಚಿತ್ರ
ಕುಣಿಗಲ್: ಪ್ರೀತಿಸುವಂತೆ ಪೀಡಿಸಿ ಶಾಲೆಯ ಮುಂಭಾಗದಲ್ಲೆ ಹಲ್ಲೆ ನಡೆಸಿದ ಕಾರಣ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಎಂಬಲ್ಲಿ ನಡೆದಿದೆ.
ಯುವಕನೊಬ್ಬ ಪ್ರೀತಿಸುವಂತೆ ವಿದ್ಯಾರ್ಥಿನಿಯನ್ನು ಪೀಡಿಸಿ, ಅವಮಾನಿಸಿದ್ದ. ಇದರಿಂದ ನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಮೃತ ಬಾಲಕಿಯ ತಾಯಿ, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ನೀಡಿದ ದೂರಿನ ಮೇರೆಗೆ ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿ ಫೆ.16ರಂದು ಮಂಗಳೂರಿನಲ್ಲಿ ಆರೋಪಿ ಸುಹೇಬ್ ಎಂಬವನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾವಿನ ಬಗ್ಗೆ ಸಾರ್ವಜನಿಕರು, ದಲಿತ ಜನ ಜಾಗೃತಿ ಸಮಿತಿ ಪದಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿ ಪ್ರಕರಣದ ತನಿಖೆ ನಡೆಸಲು ಆಗ್ರಹಿಸಿದ್ದರು. ಆತ್ಮಹತ್ಯೆಗೆ ಪ್ರೇರಣೆ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.