ಗೃಹಲಕ್ಷ್ಮಿ ಯೋಜನೆಯ ಹಣ ತಡವಾಗಿದ್ದೇಕೆ..?: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಕಳೆದ 3 ತಿಂಗಳ ಹಣ ಜಮೆಯಾಗದಿರುವುದಕ್ಕೆ ರಾಜ್ಯದಾದ್ಯಂತ ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಹಣ ತಡವಾಗಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

ತಾನು ಕಾರು ಅಪಘಾತದಿಂದಾಗಿ ಒಂದು ತಿಂಗಳಿಗೂ ಹೆಚ್ಚು ಅವಧಿಗೆ ಆಸ್ಪತ್ರೆ ಮತ್ತು ಮನೆಯಲ್ಲೇ ಉಳಿಯುವಂತಾಗಿದ್ದರಿಂದ ಹಣ ವರ್ಗಾವಣೆ ವಿಳಂಬವಾಗಿರುವುದಕ್ಕೆ ಒಂದು ಕಾರಣವಾಗಿದೆ ಎಂದಿದ್ದಾರೆ.

ನಾನು ಕಚೇರಿಯಲ್ಲಿದಿದ್ದರೆ ಹಣಕಾಸು ಇಲಾಖೆ ಮೇಲೆ ನಿರಂತರವಾಗಿ ಒತ್ತಡ ಹಾಕಿ ಹಣ ಬಿಡುಗಡೆ ಮಾಡಿಸಲು ಪ್ರಯತ್ನಿಸುತ್ತಿದ್ದೆ. ಆದರೆ ಗೃಹಲಕ್ಷ್ಮಿಯರು ಆತಂಕಪಡುವ ಅಗತ್ಯವಿಲ್ಲ, ಬಜೆಟ್ ಅಧಿವೇಶನದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಹೋಗುತ್ತಿರುವೆ, 8-10 ದಿನಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಿಸುವುದಾಗಿ ಸಚಿವೆ ಹೇಳಿದ್ದಾರೆ.

error: Content is protected !!