ಶಿರ್ವ: ಕಳೆದ 30 ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಫೆ.19ರಂದು ಬೆಳಕಿಗೆ ಬಂದಿದೆ.
ಈ ಬಗ್ಗೆ ಫೆ. 21ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಘಟನೆ ನಡೆಯುವ 15 ದಿನಗಳ ಹಿಂದೆ ಇಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಮುರಿದು ಹಾನಿಗೊಳಿಸಿರುವುದು ಕಂಡುಬಂದಿದೆ.
ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.