ಹೃದಯಾಘಾತ: ಹತ್ತನೇ ತರಗತಿಯ ವಿದ್ಯಾರ್ಥಿ ಸಾವು..!

ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಫೆ.21ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಭೈರಾಪುರ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್(16) ಎಂದು ತಿಳಿದುಬಂದಿದೆ.

ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ರಾಹುಲ್ ಕೊನೆಯುಸಿರೆಳೆದಿದ್ದಾನೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

error: Content is protected !!